ನಾವೂರು: ಕ್ಲಿನಿಕ್ ಗೆ ಬೆಂಕಿ ಇಟ್ಟಿದ್ದ ಭೂಪ ಸೆರೆ!

ಬೆಳ್ತಂಗಡಿ: ನಾವೂರು ಗ್ರಾಮದ ವೈದ್ಯ ಡಾ.ಪ್ರದೀಪ್‌ ಅವರ ಕ್ಲಿನಿಕ್‌ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಾವೂರು ನಿವಾಸಿ ರವಿ ಪೂಜಾರಿ ಎಂದು ಹೆಸರಿಸಲಾಗಿದೆ.
ನಾವೂರು ನಿವಾಸಿ ಸುರೇಶ್ ಇಂಚರ ಹಾಗೂ ದಿನೇಶ್‌ ಪ್ರಭು ನಾವೂರು ಎಂಬವರನ್ನು ಇದೇ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅ.7ರಂದು ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ತಡರಾತ್ರಿ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advt
error: Content is protected !!