ತಮಿಳುನಾಡಲ್ಲಿ ಸಿಡಿಲಿಗೆ 14 ಮಂದಿ ದಾರುಣ ಬಲಿ!

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ.


ಈ ಕುರಿತು ಕಂದಾಯ ಸಚಿವ ಕೆ.ಎ. ಸೆಂಗೊಟ್ಟಿಯನ್ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿಡಿಲು ಬಡಿದು ಒಟ್ಟು 14 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಸರ್ಕಾರ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದಿದ್ದಾರೆ.

Advt
error: Content is protected !!