ನ.1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ, ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್: ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನವಂಬರ್ 1 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ “ರಂಗು ರಂಗಿನ ರಂಗೋತ್ಸವ” ಕಾರ್ಯಕ್ರಮ ನಡೆಯಲಿದ್ದು, 2026 ನೇ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಹಿರಿಯ ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರು ಪಡೆಯಲಿದ್ದಾರೆ.
ಸಮಾರಂಭವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಂಬೈ ವಿ ಕೆ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕರುಣಾಕರ ಎಮ್ ಶೆಟ್ಟಿ ಮಧ್ಯಗುತ್ತು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬೆರ್ನಾಡ್೯, ಚಲನ ಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ, ಕಟೀಲು ಶ್ರೀ ಡೆವಲಪರ್ಸ್ ನ ಆಡಳಿತ ನಿರ್ದೇಶಕರಾದ ಗಿರೀಶ್ಎಂ ಶೆಟ್ಟಿ ಕಟೀಲು, ದಿವ್ಯರೂಪ ಕನ್ ಸ್ಟ್ರಕ್ಷನ್ ಪ್ರೈ. ಲಿಮಿಟೆಡ್ ನ ಮಾಲಕರಾದ ಯಾದವ ಕೋಟ್ಯಾನ್ ಪೆರ್ಮುದೆ, ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷರಾದ ಸಿ ಎ ಸುನೀಲ್ ಭಂಡಾರಿ ಬೆಂಗಳೂರು, ಚಲನ ಚಿತ್ರ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್, ಯಥಾಥ್೯ ಸೋಶಿಯಲ್ ನ ಸ್ಥಾಪಕಾಧ್ಯಕ್ಷರಾದ ಈಶ್ವರ್ ಪ್ರಸಾದ್ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ.


ಬಳಿಕ ಸ್ಟಾರ್ ವಾಯ್ಸ್ ಮೆಲೊಡೀಸ್ ಇವರಿಂದ ಸಂಗೀತ ಗಾನಸುಧೆ ಹಾಗೂ ಕಲಾ ಸಂಗಮ‌ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ನೂತನ ಕೃತಿ “ಶ್ರೀಮತಿ ಸತ್ಯಭಾಮ” ನಾಟಕ ಉಚಿತ ಪ್ರದರ್ಶನಗೊಳ್ಳಲಿದೆ.

Advt
error: Content is protected !!