
ಮಂಗಳೂರು: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕನ ಕುತ್ತಿಗೆಗೆ ಕಿಟಕಿಯಲ್ಲಿದ್ದ ಹಗ್ಗ ಆಕಸ್ಮಿಕವಾಗಿ ಸಿಲುಕಿ ದಾರುಣ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿಯಲ್ಲಿ ಬೆಳಕಿಗೆ ಬಂದಿದೆ. ಕುಕ್ಕಿಪಾಡಿ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಪೂಜಾರಿ ಮೃತಪಟ್ಟ ಬಾಲಕ.

ಮನೆಯಲ್ಲಿ ಆಟವಾಡುತ್ತಿದ್ದಾಗ ಕಿಟಕಿಯಲ್ಲಿದ್ದ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
