ಸೌಜನ್ಯ ಪ್ರಕರಣ: SIT ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಹೊಸದಾಗಿ SIT ನೇಮಕ ಮಾಡಿದ್ದು ಅದರ ಮುಖ್ಯಸ್ಥರನ್ನಾಗಿ ಐ.ಪಿ.ಎಸ್. ಚೇತನ್ ಸಿಂಗ್ ರಾಥೋಡ್ ರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಸದಸ್ಯರನ್ನಾಗಿ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀನಿಧಿ ಅವರನ್ನು ನೇಮಕಗೊಳಿಸಲಾಗಿದೆ. ಹಿಂದೆ ಮಂಗಳೂರು ಕಮಿಷನರ್ ಶಶಿಕುಮಾರ್ ಅವರನ್ನು SIT ಮುಖ್ಯಸ್ಥರನ್ನಾಗಿ ಸರಕಾರ ನೇಮಕ ಮಾಡಿತ್ತು.
ಉಳಿದಂತೆ ಸದರಿ ಆದೇಶದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Advt
error: Content is protected !!