
ಸುರತ್ಕಲ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರ ಆರೋಗ್ಯ ಮತ್ತು ಪೌಷ್ಟಿಕ ದಿನಾಚರಣೆಯ ಅಂಗವಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕುಳಾಯಿ, ಇವರು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ರಿ) ಸುರತ್ಕಲ್ ಇದರ ಸಹಯೋಗದೊಂದಿಗೆ ಸುರತ್ಕಲ್ ಸುಭಾಷಿತ ನಗರದಲ್ಲಿ ಆರೋಗ್ಯ ಶಿಬಿರ ನಡೆಯಿತು.
ಸುಭಾಷಿತ ನಗರ ಮತ್ತು ಸುರತ್ಕಲ್ ಭಾಗದ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡರು. ಜೀವನ ಶೈಲಿ ಹಾಗೂ ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ಶಿಬಿರದಲ್ಲಿ ಹಿರಿಯ ಅಧಿಕಾರಿ ಪ್ರದೀಪ್ ಮಾಹಿತಿ ನೀಡಿದರು. ಕುಳಾಯಿ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಸಹಕರಿಸಿದರು. ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.