
ಸುರತ್ಕಲ್: ವಿದ್ಯಾರ್ಥಿಗಳೇ ದೇಶದ ಭವಿಷ್ಯ ವಿದ್ಯಾರ್ಥಿಗಳ ನಗುವೇ ನಾಡಿನ ಸೌಭಾಗ್ಯ ಎಂದು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾನಿಧಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ನುಡಿದರು ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ದೇಶದ ಪ್ರಥಮ ಮಾಜಿ ಪ್ರಧಾನಿ ಜವಹರಲಾಲ ನೆಹರು ಅವರ ಜನ್ಮಾದಿನಾಚರಣೆಯ ಪ್ರಯುಕ್ತ ನಡೆದ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಹೆತ್ತವರಿಗೆ, ಶಿಕ್ಷಕರಿಗೆ, ಹಿರಿಯರಿಗೆ ಗೌರವ ನೀಡಬೇಕು ಯಾವುದೇ ದುಷ್ಚಟಗಳಿಗೆ ಬಲಿಯಾಗದೇ ಒಳ್ಳೆಯ ವಿದ್ಯಾರ್ಥಿಗಳಾಗಬೇಕು ಎಂದರು ವೇದಿಕೆಯಲ್ಲಿ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ವಿಠಲ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಪ್ರಪುಲ್ಲ ಪಂಜ, ನೀಲಾಧರ ಶೆಟ್ಟಿ, ಪರಮೇಶ್ವರ, ನಿಶ್ಮಿತಾ, ಕಾವ್ಯಮಣಿ, ಶುಭ, ಶಾಂತ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅನಿಲ್ ಸಾಲ್ಯಾನ್ ವಹಿಸಿದ್ದರು ಶಾಲಾ ಶಿಕ್ಷಕಿ ಸುಪ್ರೀತಾ ಸ್ವಾಗತಿಸಿ ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ ಧನ್ಯವಾದ ಸಮರ್ಪಿಸಿ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು ಇದೇ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ದೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು ಮತ್ತು ಕಲಿಕೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು