ನ.22ರಂದು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ, ಎಜುಕೇಷನಲ್ ಎಕ್ಸಲೆನ್ಸಿ ಅವಾರ್ಡ್

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ತಾಲೂಕು ಸಮಿತಿಯ ಇದರ ಆಶ್ರಯದಲ್ಲಿ ಗ್ರಾಮ ಪ್ರತಿನಿಧಿ ಸಮ್ಮೇಳನ ಮತ್ತು ಎಜುಕೇಷನಲ್ ಎಕ್ಸೆಲೆನ್ಸ್ ಅವಾರ್ಡ್ ಸಮಾರಂಭವು ನ.22ನೇ ಭಾನುವಾರ ಮಂಗಳೂರು ಪುರಭವನದಲ್ಲಿ ಬೆಳಿಗ್ಗೆ ಗಂಟೆ 9-30 ರಿಂದ ನಡೆಯಲಿದೆ ಎಂದು ಮಂಗಳೂರು ತಾಲೂಕು ಸಮಿತಿ ದಿವಾಕರ್ ಸಾಮಾನಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ. ಅಜಿತ್ ಕುಮಾ‌ರ್ ರೈ ಮಾಲಾಡಿಯವರು ವಹಿಸಿಕೊಳ್ಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಿದ್ದಾರೆ. ಜಯಪ್ರಕಾಶ್ ಹೆಗ್ಡೆ ಮಾಜಿ ಸಚಿವರು ಕರ್ನಾಟಕ ಸರಕಾರ ಇವರು ಗ್ರಾಮ ಪ್ರತಿನಿಧಿಗಳ ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಡಾ। ವೈ ಭರತ್ ಶೆಟ್ಟಿ ಶಾಸಕರು ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರ ಇವರು ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಿದ್ದಾರೆ. ಶ್ರೀ ವಿವೇಕ್ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ಆಳ್ವಾಸ್ ಎಜುಕೇಷನಲ್ ಟ್ರಸ್ಟ್ ಇವರು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ 95% ಅಂಕಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಜುಕೇಷನಲ್ ಎಕ್ಸೆಲೆನ್ಸ್ ಅವಾರ್ಡ್ ನೀಡಿ ಗೌರವಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪಸಂಚಾಲಕ ಅಶ್ವತ್ಥಾಮ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಂ.ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿ.ಎ.ರಾಮ್ ಮೋಹನ್ ರೈ, ಕಾರ್ಯಕಾರಿ ಸಮಿತಿಯ ಸದಸ್ಯ ಉಲ್ಲಾಸ್ ಆರ್. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!