“ಬೋಳಾಸ್” ಮೇಲೆ ಅರೋಗ್ಯ ಇಲಾಖೆ ಅಧಿಕಾರಿಗಳ ದಾಳಿ, 1,240 ಕೆ.ಜಿ. ಎಣ್ಣೆ ಸೀಜ್!!

ಮಂಗಳೂರು: ಬೈಕಂಪಾಡಿಯಲ್ಲಿರುವ ಬೋಳಾಸ್ ಆಗ್ರೋ ಘಟಕದಲ್ಲಿ ಗ್ರಾಹಕರನ್ನು ವಂಚಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆಯ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಸುಳ್ಳು ಲೇಬಲ್ ಹಾಕಿ ಮಾರಾಟ ಮಾಡುತ್ತಿದ್ದ 1,240 ಕೆ.ಜಿ. ಎಣ್ಣೆಯನ್ನು ಜಪ್ತಿ ಮಾಡಲಾಗಿದೆ.
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರ್ಯಾಂಡಿಂಗ್ ಹಾಗೂ ಲೇಬಲಿಂಗ್ ಲೋಪದೋಷಗಳನ್ನು ಎಸಗುತ್ತಿದ್ದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ಬರೋಬ್ಬರಿ 1,240 ಕೆ.ಜಿ. ಅಡುಗೆ ಎಣ್ಣೆಯನ್ನು ಆರೋಗ್ಯ ಇಲಾಖೆಯಿಂದ ವಶಪಡಿಸಿಕೊಳ್ಳಲಾಗಿದೆ.


ಕಡಲೆಕಾಯಿ ಎಣ್ಣೆ (ಬಾಕ್ಸ್): ಪ್ರತಿ ಬಾಕ್ಸ್‌ಗೆ 10 ಕೆ.ಜಿ.ಯಂತೆ ಒಟ್ಟು 11 ಬಾಕ್ಸ್‌ಗಳು.
ಕಡಲೆಕಾಯಿ ಎಣ್ಣೆ (ಕ್ಯಾನ್): ಪ್ರತಿ ಕ್ಯಾನ್‌ಗೆ 35 ಲೀಟರ್‌ನಂತೆ ಒಟ್ಟು 30 ಕ್ಯಾನ್‌ಗಳು.
ತೆಂಗಿನ ಎಣ್ಣೆ (ಬಾಕ್ಸ್): ಪ್ರತಿ ಬಾಕ್ಸ್‌ಗೆ 20 ಕೆ.ಜಿ.ಯಂತೆ ಒಟ್ಟು 4 ಬಾಕ್ಸ್‌ಗಳು ವಶಕ್ಕೆ ಪಡೆಯಲಾಗಿದೆ.

error: Content is protected !!