
ಮಂಗಳೂರು: ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋನನ್ನು ಎರಡನೇ ಬಾರಿ ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪೆರ್ಮನ್ನೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್ನಲ್ಲಿ 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಳೆದ ಮೇ ತಿಂಗಳಲ್ಲಿ ಮಂಗಳೂರಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್ನಲ್ಲಿ ಸಿಪ್ರಿಯನ್ ಪಿಂಟೋ ಪಾದ್ರಿಯಾಗಿದ್ದು ಈ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮೇ 13, 2026ರಂದು ದೂರು ದಾಖಲಾಗಿತ್ತು.
ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಕೇಂದ್ರ ವಿಭಾಗದ ಎಸಿಪಿಗೆ ವಹಿಸಿದ್ದರು. ಇದೀಗ ಇದೇ ಪ್ರಕರಣದಲ್ಲಿ ಸಿಪ್ರಿಯನ್ ಪಿಂಟೋನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.