ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ನೌಕರರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ನಗರದ ರೋಟರಿ ಬಾಲಭವನ ಉರ್ವದಲ್ಲಿ ನಡೆಯಿತು‌.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ ಪದ್ಮನಾಭ ಅವರು ಹಾಗೂ ಪದಾಧಿಕಾರಿಗಳು, ಸದಸ್ಯರುಗಳ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲನೆಯೊಂದಿಗೆ ಸಭೆಯು ಆರಂಭಗೊಂಡಿತು.
ಕಾರ್ಯಕ್ರಮದ ಮುಖ್ಯ ಅಂಗವಾಗಿ ಸದಸ್ಯರಲ್ಲಿ 75 ವರ್ಷ ಮೇಲ್ಪಟ್ಟ ಸುಮಾರು 25 ಮಂದಿ ಸದಸ್ಯರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಗೌರವಾಧ್ಯಕ್ಷರಾದ ಕೆ.ಜಗನ್ನಾಥ ಶೆಟ್ಟಿಸಂಘದ ನಿವೃತ್ತ ನೌಕರರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸುವಲ್ಲಿ ಸರ್ಕಾರದ ಸಂಪರ್ಕದಲ್ಲಿರಲು ರಾಜ್ಯ ಘಟಕವನ್ನು ಒತ್ತಾಯಿಸುವುದರ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಮುಖ್ಯ ಸಲಹೆಗಾರರಾದ ಕೆ ಲೋಕಯ್ಯ ಗೌಡ, ಬಿ ದಯಾನಂದ ಉಪಸ್ಥಿತರಿದ್ದರು. ರಾಮು ಮೈಪಾಡಿ ಪ್ರಾರ್ಥಿಸಿದರು, ಪ್ರಧಾನ ಕಾರ್ಯದರ್ಶಿ ಉಮೇಶ್ ಅತಿಕಾರಿ ವಾರ್ಷಿಕ ವರದಿ ವಾಚಿಸಿದರು. ಸಂಘಟನಾ ಕಾರ್ಯದರ್ಶಿ ಎ ಶಿವಣ್ಣ ನಾಯ್ಕ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಚಿನ್ನಪ್ಪ ಮೂಲ್ಯ ವಂದಿಸಿದರು. ಜೊತೆ ಕಾರ್ಯದರ್ಶಿ ರಾಮ್ ಕುಮಾರ್ ಪಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!