ತೋಕೂರು ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವದ ಪೂರ್ವಭಾವಿ ಬೃಹತ್ ಸ್ವಚ್ಛತಾ ಶ್ರಮದಾನ


ಹಳೆಯಂಗಡಿ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ತೋಕೂರು ಹಳೆಯಂಗಡಿ ಇದರ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ನಡೆದ ದೇವಳದ ಪರಿಸರ ಸ್ವಚ್ಛತಾ ಶ್ರಮದಾನಕ್ಕೆ ಗುರುರಾಜ್ ಎಸ್, ಪೂಜಾರಿ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇವರು ಚಾಲನೆ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಗ್ರಾಮಸ್ಥರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಸದಸ್ಯೆಯರು ಭಾಗವಹಿಸಿ ಶ್ರಮದಾನವನ್ನು ಯಶಸ್ವಿಗೊಳಿಸಿದರು. ಈ ಸಂಧರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ್ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸಂಪತ್ ಜೆ ಶೆಟ್ಟಿ ತೋಕೂರುಗುತ್ತು, ಅಶೋಕ್ ಕುಂದರ್, ಶೋಭಾ ವಿ, ಅಂಚನ್, ನಿಕಟ ಪೂರ್ವ ಅಧ್ಯಕ್ಷರಾದ ಹರಿದಾಸ ಭಟ್,ಗ್ರಾಮಸ್ಥರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

error: Content is protected !!