ವಿಟ್ಲ: ದೊಡ್ಡಪ್ಪನನ್ನೇ ಕೊಲೆಗೈದ ಮಗಳು! ಪೊಲೀಸರಿಂದ ತನಿಖೆ!!

ಮಂಗಳೂರು: ಮನೆಯ ಬಳಿ ಬಂದು ಗಲಾಟೆ ಮಾಡಿದ ಕ್ಷುಲ್ಲಕ ಕಾರಣಕ್ಕೆ ದೊಡ್ಡಪ್ಪನನ್ನೇ ಮಗಳು ಕೊಲೆಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಘಟನೆಯ ವಿವರ:
ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ(55) ಮೃತಪಟ್ಟವರು.
ಚೆನ್ನಯ್ಯ ಪೂಜಾರಿ ಅವರು ತನ್ನಸೋದರನ ಮಗಳು ವಾಸವಿದ್ದ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದು ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಅಷ್ಟರಲ್ಲಿ ಸೋದರನ ಮಗಳು ಚಾಕುವಿನಿಂದ ತಿವಿದ ಪರಿಣಾಮ ಚೆನ್ನಯ್ಯ ಪೂಜಾರಿ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!