
ಮಂಗಳೂರು: ಉರ್ವ ಮಾರಿಗುಡಿ ಸಮೀಪ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಫ಼ಾರ್ಚುನರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಅಲ್ಟೊ ಕಾರ್ ಚಾಲಕ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಮೃತರ ವಿವರ ಲಭ್ಯವಾಗಿಲ್ಲ.
ಗಾಂಧಿನಗರ ಶಾಲೆಯ ಬಳಿ ಆಲ್ಟೊ ಕಾರಿಗೆ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಲ್ಟೊ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.