ಇರಾನ್‌ ಮೇಲೆ ದಾಳಿ ಆರಂಭಿಸಿದ ಇಸ್ರೇಲ್;‌ ಡೊನಾಲ್ಡ್‌ ಟ್ರಂಪ್‌

ಇಸ್ರೇಲ್ : ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ಅಹಮದಾಬಾದ್‌ ವಿಮಾನ ದುರಂತ : ಘಟನಾ ಸ್ಥಳಕ್ಕೆ ಪ್ರದಾನಿ ಭೇಟಿ

ಅಹಮದಾಬಾದ್‌ : ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ…

error: Content is protected !!